September 3, 2026

ಬೆಳ್ತಂಗಡಿ: ದಾಖಲೆ ಇಲ್ಲದೆ ATM ವಾಹನದಲ್ಲಿ ಹಣ ಸಾಗಾಟ: 10 ಲಕ್ಷ ರೂ. ವಶಕ್ಕೆ ಪಡೆದ ಪೂಂಜಾಲಕಟ್ಟೆ ಪೊಲೀಸರು

0
image_editor_output_image-811469672-1681194238363.jpg

ಬೆಳ್ತಂಗಡಿ: ದಾಖಲೆ ಇಲ್ಲದೆ 10 ಲಕ್ಷ ರೂ. ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ 10 ಗಂಟೆಗೆ ವಶಕ್ಕೆ ಪಡೆದಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು.

ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ ದಾಖಲೆಗಳಿಲ್ಲದೆ ಅವಧಿ ಮೀರಿ 10 ಲಕ್ಷ ರೂ. ಮೊತ್ತವನ್ನು ರಾತ್ರಿ 10 ಗಂಟೆ ಸುಮಾರಿಗೆ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.

ಈ ಕುರಿತು ತಕ್ಷಣವೇ ಹಣ ಹಾಗೂ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!