ಬಿಜೆಪಿಯ 189 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿ ಮೊದಲ ಪಟ್ಟಿ ಬಿಡುಗಡೆ
ಹೊಸದಿಲ್ಲಿ: ಮೇ 10ಕ್ಕೆ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ.
ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇದರ ನಡುವೆ ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ರವರು ಆಯ್ಕೆಯಾಗಿದ್ದಾರೆ. ಆಶಾ ತಿಮ್ಮಪ್ಪ ಗೌಡ ರವರ ಆಯ್ಕೆ ಬಹಳ ಅಚ್ಚರಿ ಮೂಡಿಸಿದೆ.




