February 2, 2026

ಚುನಾವಣ ತರಬೇತಿಯಲ್ಲಿ ಭಾಗವಹಿಸಿದ್ದ ಶಿಕ್ಷಕ ಮೃತ್ಯು

0
image_editor_output_image1165219299-1681256713963.jpg

ದಾವಣಗೆರೆ: ಚುನಾವಣ ತರಬೇತಿಯಲ್ಲಿ ಭಾಗವಹಿಸಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚನ್ನಗಿರಿ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಚನ್ನಗಿರಿ ಪಟ್ಟಣದ ಸರಕಾರಿ ಕಾಲೇಜಿನಲ್ಲಿ ಶಿಕ್ಷಕರಿಗೆ ಚುನಾವಣ ತರಬೇತಿ ಆಯೋಜಿಸಲಾಗಿತ್ತು. ತರಬೇತಿಯಲ್ಲಿ ಭಾಗವಹಿಸಿದ್ದ ಸಂತೇಬೆನ್ನೂರು ಗ್ರಾಮದ ವಿಜಯ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕ ಬೆಳ್ಳಿಗನೂಡು ಶ್ರೀನಿವಾಸ್‌ (41) ಎಂಬವರು ಎದೆನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಶ್ರೀನಿವಾಸ್‌ ಮೃತಪಟ್ಟಿದ್ದರು.

Leave a Reply

Your email address will not be published. Required fields are marked *

error: Content is protected !!