February 2, 2026

ಕಡಬದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

0
image_editor_output_image-984359306-1681259029364.jpg

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮರ್ದಾಳ ನಿವಾಸಿ ಶಫೀಕ್ ಮೃತ ವ್ಯಕ್ತಿ. ಬೆಂಗಳೂರಿನ‌ ಯಲಹಂಕದ ಬಳಿ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ಇವರು ಇಂದು ನಿದ್ರೆಯಿಂದ ಎದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು.

ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವನ್ನೊಪ್ಪಿರುವುದಾಗಿ ತಿಳಿದು ಬಂದಿದೆ.

ಆಂಬ್ಯುಲೆನ್ಸ್ ಮೂಲಕ ಮೃತದೇಹ ಕಡಬಕ್ಕೆ ತರಲು ಸಿದ್ದತೆ ನಡೆಸಲಾಗುತ್ತಿದ್ದು, ಮೃತರು ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ..

Leave a Reply

Your email address will not be published. Required fields are marked *

error: Content is protected !!