February 2, 2026

ಉಳ್ಳಾಲ: ಮೀನಿನ ಬಲೆಗೆ ಆಕಸ್ಮಿಕ ಬೆಂಕಿ: 15 ಲಕ್ಷ ರೂ. ಮೌಲ್ಯದ ಸೊತ್ತುಗಳು ಹಾನಿ

0
image_editor_output_image-1624903791-1681342123898.jpg

ಉಳ್ಳಾಲ: ಮೀನಿನ ಬಲೆಗೆ ಆಕಸ್ಮಿಕ ಬೆಂಕಿ ಬಿದ್ದು ರೂ.15 ಲಕ್ಷ ಸೊತ್ತುಗಳು ಹಾನಿಯಾಗಿರುವ ಘಟ ನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ನಡೆದಿದೆ.

ಇಂದು ಮದ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ.

ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ನಾಡ ದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ,ಸಂತೋಷ್ ಉಚ್ಚಿಲ,ಸಾಧನ ಉಚ್ಚಿಲ,ಶೇಖರ್ ಸೋಮೇಶ್ವರ,ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

Leave a Reply

Your email address will not be published. Required fields are marked *

error: Content is protected !!