February 2, 2026

ಆಟೊ ರಿಕ್ಷಾ ಢಿಕ್ಕಿ: ರಸ್ತೆಯ ಬದಿಯಲ್ಲಿದ್ದ ಗರ್ಭಿಣಿ ಸ್ಥಳದಲ್ಲೇ ಮೃತ್ಯು

0
image_editor_output_image-832508520-1681369101875.jpg

ಅಂಕೋಲಾ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿಯೊಬ್ಬರಿಗೆ ಆಟೊ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಅಂಕೋಲಾದ ಬಾವಿಕೇರಿಯಲ್ಲಿ ನಡೆದಿದೆ.

ಅಂಕೋಲಾದ ಶೋಭಾ ಗೋಪಾಲ ನಾಯಕ(28) ಮೃತಪಟ್ಟ ಮಹಿಳೆಯಾಗಿದ್ದಾರೆ.

ಶೋಭಾ ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಅವರು ತನ್ನ ಮನೆ ಮುಂದಿನ ಡಾಮರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಆಟೊ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ.

ಇದರಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಶೋಭಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳದಿಂದ ಆಟೊ ರಿಕ್ಷಾ ಚಾಲಕ ಪರಾರಿಯಾಗಿದ್ದಾನೆ.

ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!