ಮೋದಿ ಉಪನಾಮ ಪ್ರಕರಣ: ರಾಹುಲ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ತೀರ್ಪು ಏ. 20ಕ್ಕೆ ಪ್ರಕಟ
ಸೂರತ್: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ 2019ರಲ್ಲಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ತೀರ್ಪು ಅನ್ನು ಗುಜರಾತ್ ನ ಸೂರತ್ ನ್ಯಾಯಾಲಯ ಏಪ್ರಿಲ್ 20ರಂದು ಪ್ರಕಟಿಸಲಿದೆ.
‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಯನ್ನ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಇನ್ನು ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನ್ಯಾಯಸಮ್ಮತವಲ್ಲ ಮತ್ತು ಈ ಪ್ರಕರಣದಲ್ಲಿ ಗರಿಷ್ಠ ಶಿಕ್ಷೆಯ ಅಗತ್ಯವಿಲ್ಲ ಎಂದು ರಾಹುಲ್ ಗಾಂಧಿ ಅವರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು.




