ವಿಧಾನಸಭೆ ಚುನಾವಣೆ: ಮೊದಲ ದಿನವೇ ನಾಮಪತ್ರ ಸಲ್ಲಿಸಿದ ರಮೇಶ ಜಾರಕಿಹೊಳಿ
ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾದ ಮೊದಲ ದಿನವೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ ಜಾರಕಿಹೊಳಿ ಗುರುವಾರ ನಾಮಪತ್ರ ಸಲ್ಲಿಸಿದರು.
ಇನ್ನು ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ರಮೇಶ ಜಾರಕಿಹೊಳಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.




