ಚಿಕ್ಕಮಗಳೂರು: ನಿರಂತರ ಮಳೆಯಿಂದ ಮನೆಗೋಡೆ ಕುಸಿದು ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್(45) ಮೃತ ದುರ್ದೈವಿ. ಮಲಗಿದ್ದ ವ್ಯಕ್ತಿ ಮೇಲೆ ಮನೆಗೋಡೆ ಕುಸಿದುಬಿದ್ದಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
