September 3, 2026

ಮಂಗಳೂರು: ಗಾಂಜಾ ಮಾರಾಟ, ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂವರು ಆರೋಪಿಗಳ ಬಂಧನ

0
image_editor_output_image210989096-1681514103244.jpg

ಮಂಗಳೂರು: ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು.

ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ.

ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾ ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆನ್ನಲಾಗಿದೆ.

ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಶೀತಲ್ ಅಲಗೂರು ರವರಿಗೆ ಬಂದ ಮಾಹಿತಿ ಮೇರೆಗೆ ಆರೋಪಿ ಪ್ರಜ್ವಲ್ ಫಿನ್ಹಾನ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಆತನ ಮಾಹಿತಿ ಮೇರೆಗೆ ಉಳಿದ ಆರೋಪಿಗಳನ್ನು ಸಿಸಿಬಿ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!