February 2, 2026

ಬಂಟ್ವಾಳ: ಹೃದಯಾಘಾತದಿಂದ ಅವಿವಾಹಿತ ಯುವಕ ಮೃತ್ಯು

0
image_editor_output_image-1423758454-1681516016372.jpg

ಬಂಟ್ವಾಳ: ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಧೀರಜ್ ಮೃತರು ಎಂದು ತಿಳಿದುಬಂದಿದೆ.

ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಬೆಳಗ್ಗೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು.

ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!