February 2, 2026

ಬಿಜೆಪಿಗೆ ಗುಡ್ ಬೈ ಹೇಳಿದ್ದ ಲಕ್ಷ್ಮಣ ಸವದಿಗೆ ಅಥಣಿಯಿಂದ ಕಾಂಗ್ರೆಸ್ ಟಿಕೆಟ್

0
IMG-20230415-WA0034.jpg

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ 43 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ರಿಲೀಸ್‌ ಮಾಡಲಾಗಿದೆ.

ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್‌ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಲಕ್ಷ್ಮಣ ವದಿ ಕಾಂಗ್ರೆಸ್ ಪಕ್ಷಕ್ಕೆ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಮ್ಮುಖದಲ್ಲಿ ಶುಕ್ರವಾರ ಸೇರ್ಪಡೆಗೊಂಡಿದ್ದರು.

ಇನ್ನು ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!