February 2, 2026

ನಟಿ ಮಾನ್ವಿತಾ ಕಾಮತ್‌ಗೆ ಮಾತೃ ವಿಯೋಗ

0
IMG-20230415-WA0035.jpg

ಬೆಂಗಳೂರು: ಮಾನ್ವಿತಾ ಕಾಮತ್ ತಾಯಿ ಸುಜಾತಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸುಜಾತ ಅವರಿಗೆ ಕಿಡ್ನಿ ಕಸಿ ಮಾಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ಹೊಂದಿದ್ದಾರೆ.

ಇನ್ನು ಸುಜಾತಾ ಕಾಮತ್ ಅನಾರೋಗ್ಯ ಉಂಟಾದಾಗ ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ಮಾನ್ವಿತಾ ಕಾಮತ್, ‘ಈಗತಾನೇ ಸೋನು ಸೂದ್ ಅವರ ಜತೆ ಮಾತನಾಡಿದೆ. ನನ್ನ ತಾಯಿಗೆ ಅವರು ಮಾಡಿದ ಸಹಾಯಕ್ಕೆ ಧನ್ಯವಾದ ಹೇಳಿದೆ. ನೀವು ನಿಜವಾದ ಹೀರೋ ಸರ್. ಎಲ್ಲದಕ್ಕೂ ಧನ್ಯವಾದ. ನಿಮ್ಮಿಂದಾಗಿ ನನ್ನ ತಾಯಿ ಇಂದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾನ್ವಿತಾ ಬರೆದುಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!