March 23, 2026

ಸುಳ್ಯ: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬಿಕ್ಕಟ್ಟು: ಸುಳ್ಯಕ್ಕೆ ಆಗಮಿಸಿ ರಮಾನಾಥ ರೈ ನೇತೃತ್ವದ ನಿಯೋಗ: ಎರಡು ಬಣಗಳ ನಡುವೆ ಮಾತಿನ ಚಕಮಕಿ

0
IMG-20230415-WA0036.jpg

ಸುಳ್ಯ: ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ವಿಷಯದಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆ ಮೇರೆಗೆ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ತಂಡ ಸುಳ್ಯಕ್ಕೆ ಆಗಮಿಸಿದ್ದಾರೆ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಗ್ರಹಣೆಗೆ ಆಗಮಿಸಿದ್ದು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರ ಕಾರ್ಯ ನಡೆಸಿದರು. ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಇತ್ತಂಡಗಳ ಅಭಿಮಾನಿಗಳಾದ ಕಾರ್ಯಕರ್ತರು ಭಾಗವಹಿಸಿದ್ದು. ಸಭಾಂಗಣ ತುಂಬಿ ತುಳುಕಿತ್ತು.
ಈ ನಡುವೆ ಎರಡೂ ಬಣಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ವಾಗ್ವಾದ ನಡೆಯಿತು. ನಂದಕುಮಾರ್ ಅವರಿಗೆ ಬಿಫಾರಂ ನೀಡಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸಿದರು.

ಆಕ್ರೋಶಗೊಂಡ ಕೆಲ ಕಾರ್ಯಕರ್ತರನ್ನು ಸಮಾಧಾನಪಡಿಸಲು ನಾಯಕರು ಹರ‌ಸಾಹಸ ಪಡಬೇಕಾಯಿತು. ನಂದಕುಮಾರ್ ಅವರೇ ಅವರ ಬೆಂಬಲಿಗರಾದ ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದು ಕಂಡು ಬಂತು. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃದಲ್ಲಿ ಬೆಂಗಳೂರಿನಲ್ಲಿ ಸಭೆಸಿ ಬಿಕ್ಕಟ್ಟಿನ ಕುರಿತು ಪರಿಶೀಲನೆ ನಡೆಸಿ ಕೆಪಿಸಿಸಿಗೆ ವರದಿ ನೀಡುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಬಿ.ರಮಾನಾಥ ರೈ ಅವರಿಗೆ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಮಾನಾಥ ರೈ ಅವರು ಏ.15 ರಂದು ಸುಳ್ಯಕ್ಕೆ ಆಗಮಿಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,
ಬ್ಲಾಕ್ ಅಧ್ಯಕ್ಷ ಪಿ ಸಿ ಜಯರಾಮ, ಭರತ್ ಮುಂಡೋಡಿ, ಪಿ.ಎಸ್ ಗಂಗಾಧರ, ಟಿ.ಎಂ.ಶಹೀದ್ ತೆಕ್ಕಿಲ್, ಡಾ.ರಘು,ಎಂ.ವೆಂಕಪ್ಪ ಗೌಡ, ಸರಸ್ವತಿ ಕಾಮತ್, ಮತ್ತಿತರ ನಾಯಕರು ಉಪಸ್ಥಿತದ್ದರು.

Leave a Reply

Your email address will not be published. Required fields are marked *

error: Content is protected !!