March 23, 2026

ಲಂಚ ಪಡೆದ ಆರೋಪ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

0
hr-150423-madal.jpg

ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್‌ಗಾಗಿ ಲಂಚ ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ 5 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಲ್ಲದೆ, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು ಮತ್ತು ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ಎಂಬ ಷರತ್ತು ವಿಧಿಸಲಾಗಿದೆ.

ಇನ್ನು ಕರ್ನಾಟಕ ಸಾಬೂನು ಮಾರ್ಜಕ ಕಾರ್ಖಾನೆಗೆ ಭೇಟಿ ನೀಡಲಾಯಿತು, ಸಾಕ್ಷ್ಯಾಧಾರ ನಾಶಪಡಿಸಲಾಗಿದೆ ಎಂದು ಷರತ್ತು ಹಾಕಿ ಜಾಮೀನು ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!