‘ನನಗೆ ಟಿಕೆಟ್ ನಿರಾಕರಿಸಿದ್ರೆ, ರಾಜ್ಯದಲ್ಲಿ 20 -25 ಸ್ಥಾನಗಳ ಮೇಲೆ ಪರಿಣಾಮ ಬೀರಲಿದೆ’ – ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಕೇಳಿದ್ದಕ್ಕೆ ಬಂಡಾಯದ ಧ್ವನಿಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಒಂದು ವೇಳೆ ನನಗೆ ಟಿಕೆಟ್ ನಿರಾಕರಿಸಿದರೆ ಕನಿಷ್ಠ 20 ರಿಂದ 25 ಸ್ಥಾನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಶೆಟ್ಟರ್, ಟಿಕೆಟ್ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕಾಗಿ ಭಾನುವಾರದವರೆಗೂ ಕಾಯುತ್ತೇನೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಸೇರಿದಂತೆ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇನ್ನೂ ಬಿಡುಗಡೆ ಮಾಡಿಲ್ಲ. ನಾಳೆಯವರೆಗೂ ಕಾದು ನಂತರ ಮುಂದಿನ ನಡೆ ನಿರ್ಧರಿಸುತ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ
ಪಕ್ಷದ ಹಿರಿಯ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದರಿಂದ ಬಿಜೆಪಿಯ ಮೇಲೆ ಬೀರುವ ಪರಿಣಾಮದ ಬಗ್ಗೆ ಪ್ರಶ್ನಿಸಿದಾಗ, ” ವರಿಷ್ಠರು ಈ ಬಗ್ಗೆ ಯೋಚಿಸಬೇಕು ಪಕ್ಷವು ಯಾವುದೇ ಋಣಾತ್ಮಕ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಶೆಟ್ಟರ್ ಅವರಿಗೆ ಟಿಕೆಟ್ ಸಿಗದಿದ್ದರೆ ಒಂದೇ ಕಡೆ ಅಲ್ಲ… ತಕ್ಷಣದ ಪರಿಣಾಮ ಬೀರಲಿದೆ ಎಂದಿದ್ದಾರೆ ಎಂದು ಹೇಳಿದ್ದಾರೆ.




