ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಿಸಿದರು.
ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ ಪ್ರಕಟಿಸಿದರು.

