February 3, 2026

ಕುಂದಾಪುರ: ಹೊಳೆಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

0
IMG-20230416-WA0008.jpg

ಕುಂದಾಪುರ: ಕುಂದಾಪುರದ ಕೋಣಿ ಗ್ರಾಮದ ಕೆಳಾಕೇರಿಯ ಹೊಳೆಯಲ್ಲಿ ಶುಕ್ರವಾರ ಸಂಜೆ ಈಜಲು ತೆರಳಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ತಿಲಕ್‌ ಕೆ.ಜಿ. (19) ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಶನಿವಾರ ಬೆಳಗ್ಗೆ ಆತನ ಮೃತದೇಹ ಪತ್ತೆಯಾಗಿದೆ.

ಮೂಲತಃ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಗ್ರಾಮದ ಜಗದೀಶ್‌ ಅವರ ಪುತ್ರ ತಿಲಕ್‌ ಪ್ರಥಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ.

ಇನ್ನು ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಕಾಲೇಜಿಗೆ ರಜೆಯಿದ್ದುದರಿಂದ ಸ್ನೇಹಿತರೊಂದಿಗೆ ಹೊಳೆಯಲ್ಲಿ ಈಜಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ.

ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!