ಶಾಸಕ ಸಿ.ಟಿ.ರವಿ ಆಸ್ಪತ್ರೆಗೆ ದಾಖಲು
ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದು, ಜಗದೀಶ್ ಶೆಟ್ಟರ್ ಸಹಿತ ಹಲವು ನಾಯಕರು ಬಿಜೆಪಿಗೆ ಗುಡ್ ಬೈ ಎಂದಿದ್ದಾರೆ. ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಸಿ.ಟಿ.ರವಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಿಡ್ನಿಯಲ್ಲಿ 12 ಎಂ.ಎಂ. ಕಲ್ಲು ಇದೆ. ಸ್ಟಂಟ್ ಮೂಲಕ ಕಲ್ಲುಗಳ ರವಾನೆ ಮಾಡಲಾಗುತ್ತಿದ್ದು, ಇಂದು ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಿದ್ದಾರೆ ಎಂಬ ಮಾಹಿತಿ ಇದೆ.




