March 23, 2026

ಕಾಂಗ್ರೆಸ್ ನಾಯಕರ ಜೊತೆ ಜಗದೀಶ್ ಶೆಟ್ಟರ್ ಮಹತ್ವದ ಸಭೆ:
ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ನಾಯಕರು ಭಾಗಿ

0
WhatsApp_Image_2023-04-16_at_23_06_41-transformed.jpeg

ಬೆಂಗಳೂರು: ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆ ವಿಫಲಾದ ಕಾರಣ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರು. ಇದೀಗ ಕಾಂಗ್ರೆಸ್ ನಾಯಕರು ನಡೆಸಿದ ಮಾತುಕತೆ ಸಕ್ಸಸ್ ಆಗಿರುವ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.

ಕಾಂಗ್ರೆಸ್ ನಾಯಕರು ಬಿಜೆಪಿ ಟಿಕೆಟ್ ವಂಚಿತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜೊತೆ ನಗರದ ಸ್ಕೈ ಗಾರ್ಡನ್ ಅಪಾರ್ಟ್ಮೆಂಟ್ ನಲ್ಲಿ ಪ್ರಮುಖ ಸಭೆ ನಡೆಸಿದ್ದಾರೆ. ಸತತ 2 ಗಂಟೆಯಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಂ.ಬಿ. ಪಾಟೀಲ್, ಎಸ್ ಎಸ್ ಮಲ್ಲಿಕಾರ್ಜುನ್, ಝಮೀರ್ ಅಹ್ಮದ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಬಿಜೆಯಿಂದ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಬಂಡಾಯವೆದ್ದ ಶೆಟ್ಟರ್ ಮನವೊಲಿಸಲು ಬಿಜೆಪಿ ಹಲವು ಪ್ರಯತ್ನ ನಡೆಸಿತು. ಆದರೆ ಪಟ್ಟು ಬಿಡದ ಶೆಟ್ಟರ್ ಟಿಕೆಟ್ ನೀಡಲು ಒತ್ತಾಯಿಸಿದ್ದರು. ಇತ್ತ ಕೇಂದ್ರ ಬಿಜೆಪಿ ನಾಯಕರು ಟಿಕೆಟ್ ಹೊರತು ಪಡಿಸಿ ಉಳಿದೆಲ್ಲಾ ಆಫರ್ ನೀಡಿದ್ದರು. ಇವೆಲ್ಲವನ್ನು ತಿರಿಸ್ಕರಿಸಿದ ಶೆಟ್ಟರ್ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗೆಡೆ ಕಾಗೇರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!