September 20, 2024

ಬೆಳ್ತಂಗಡಿ: ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

0

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು.ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು.ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ.

Leave a Reply

Your email address will not be published. Required fields are marked *

error: Content is protected !!