February 1, 2026

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮ

0
image_editor_output_image-675242381-1681723521014.jpg

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ.

ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರು ನಿನ್ನೆ ರಾತ್ರಿ ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕಾರಿನಲ್ಲಿ ಒಬ್ಬರೇ ಇದ್ದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಬೆಂಕಿಯಿಂದ ಇಡೀ ಕಾರು ಹೊತ್ತಿ ಭಸ್ಮ ವಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದರಿಂದ ಲಕ್ಷಾಂತರ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!