February 2, 2026

ಬಂಟ್ವಾಳ: ಎ.20 ರಂದು ಮಾಜಿ ಸಚಿವ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

0
IMG-20230417-WA0013.jpg

ಬಂಟ್ವಾಳ: ಕೆಲಸ ಮಾಡದೆ ನಾನು ಸೋತಿಲ್ಲ,ಕೆಲಸ ಮಾಡಿಯೂ ಸೋಲಿಸಿದರು.ಸೋಲಿಗೆ ವಿರೋಧಿಗಳ ವ್ಯಾಪಕ ಅಪಪ್ರಚಾರ ಕಾರಣವಾಯಿತು.ನನಗೆ ಅದಕ್ಕೆ ಬೇಸರವಿಲ್ಲ,ಆದರೆ ಸೋಲಿಸಿದ ರೀತಿಗೆ ಬೇಸರವಿದೆ ಎಂದು ಬಿ.ರಮಾನಾಥ ರೈ ಅವರು ಹೇಳಿದರು.

ಬಿಸಿರೋಡಿನ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ಈ ಬಾರಿ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಸತತವಾಗಿ 9 ಬಾರಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೇಸ್ ಪಕ್ಷಕ್ಕೆ ಧನ್ಯವಾದ, ಮತ್ತು ಅವಕಾಶ ನೀಡಿದ್ದಕ್ಕೆ ತುಂಬಾ ಸಂತೋಷ ಕೂಡ ಆಗಿದೆ ಎಂದು ಅವರು ತಿಳಿಸಿದರು.

ನನ್ನ ಶಾಸಕತ್ವದ ಸಂದರ್ಭದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜಿಲ್ಲೆಯಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಆಗಿದೆ ಎಂದು ಅವರು ತಿಳಿಸಿದರು.

ಕಳೆದ ಬಾರಿವ ನಾನು ಶಾಸಕನಾಗಿದ್ದ ಸಿದ್ದ ರಾಮಯ್ಯ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಪಾರ್ಕ್, ಮಿನಿವಿಧಾನಸೌಧ, ಕೆ.ಎಸ್.ಆರ್.ಟಿ.ಸಿ. ಐ.ಬಿ.ಸೇರಿದಂತೆ ಐದು ವರ್ಷದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಪಿ.ಡಿ.ಎಲ್.ಡಿ.ಬ್ಯಾಂಕ್ ನ ಮೂಲಕ ರಾಜಕೀಯ ಪ್ರವೇಶ ಮಾಡಿದ ಬಳಿಕ ಸಾಮಾಜಿಕ ಬದುಕಿನಲ್ಲಿ ಹಂತಹಂತವಾಗಿ ಪಕ್ಷದ ಜವಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದೇನೆ.

ಎ.20 ರಂದು ಗುರುವಾರ 12.35 ಕ್ಕೆ ನಾನು ನಾಮಪತ್ರ ಸಲ್ಲಿಸಲಿದ್ದೇನೆ. ಅದಕ್ಕೂ ಮೊದಲು ಬಂಟ್ವಾಳ ಶ್ರೀ ವೆಂಕಟರಮಣ ದೇವಾಲಯದಿಂದ ಬೆಳಿಗ್ಗೆ 9 ಗಂಟೆಗೆ ಪೂಜೆ ಸಲ್ಲಿಸಿ ಅ ಬಳಿಕ ಮೆರವಣಿಗೆ ಮೂಲಕ ಬಿಸಿರೋಡಿಗೆ ಬಂದು ಆಡಳಿತ ಸೌಧದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ. ನಾಮಪತ್ರ ಸಲ್ಲಿಕೆಯ ದಿನ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜೊತೆಯಲ್ಲಿ ಬರಬೇಕು ಎಂದು ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿಕುಂದರ್, ಸುದೀಪ್ ಶೆಟ್ಟಿ, ಪ್ರಮುಖರಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಜಯಂತಿ ಪೂಜಾರಿ, ಪದ್ಮಶೇಖರ್ ಜೈನ್ ಮಾಯಿಲಪ್ಪ ಸಾಲ್ಯಾನ್,ಅಬ್ಬಾಸ್ ಆಲಿ, ಮಹಮ್ಮದ್ ಶರೀಫ್, ಜನಾರ್ದನ ಚೆಂಡ್ತಿಮಾರ್, ಸುಭಾಶ್ಚಂದ್ರ ಶೆಟ್ಟಿ,ಉಮೇಶ್ ಸಪಲ್ಯ,ಸುರೇಶ್ ಕುಲಾಲ್, ಸಂಜೀವ ಪೂಜಾರಿ, ನಾರಾಯಣ ನಾಯ್ಕ್ ,ವಾಸು ಪೂಜಾರಿ, ಸಿದ್ದೀಕ್ ಬೊಗೋಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!