July 1, 2026

ಬಂಟ್ವಾಳ ಎಸ್.ಡಿ.ಪಿ.ಐ. ಅಭ್ಯರ್ಥಿ ಇಲ್ಯಾಸ್ ತುಂಬೆ ನಾಮಪತ್ರ ಸಲ್ಲಿಕೆ

0
IMG-20230417-WA0014.jpg

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಕಾಲ್ನಡಿಗೆಯ ಜಾಥಾ ಮೂಲಕ ಬಂಟ್ವಾಳ ಆಡಳಿತ ಸೌಧದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ರಾಷ್ಟ್ರೀಯ ಚುನಾವಣಾ ವೀಕ್ಷಕ ವಿ ಎಂ ಫೈಝಲ್, ಬಂಟ್ವಾಳ ಕ್ಷೇತ್ರಾಧ್ಯಕ್ಷ ಮೂನಿಷ್ ಆಲಿ, ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಚುನಾವಣಾ ಉಸ್ತುವಾರಿ ಶಾಹುಲ್ ಹಮೀದ್ ಎಸ್‌ಎಚ್ ಉಪಸ್ಥಿತರಿದ್ದರು. ಇದೇ ಸಂದರ್ಭ ಅಬ್ದುಲ್ ಮಜೀದ್ ಖಾನ್ ಅವರೂ ನಾಮಪತ್ರ ಸಲ್ಲಿಸಿದರು.

ಕಾಲ್ನಡಿಗೆ ಜಾಥಾ ಕ್ಕೂ ಮುನ್ನ ಎಸ್ ಡಿ ಪಿ ಐ ‘ಜನಮಿಡಿತ ಪ್ರಣಾಳಿಕೆ’ ಯನ್ನು ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರದ ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ವಿ ಎಮ್ ಫೈಝಲ್ ಬಿಡುಗಡೆಗೊಳಿ ಮಾತನಾಡಿ, ಇಲ್ಲಿ ಅರಾಜಕತೆಯನ್ನು ಸೃಷ್ಟಿ ಮಾಡುವ ಬಿಜೆಪಿ ಮತ್ತು ನಕಲಿ ಜಾತ್ಯಾತೀತರೆನ್ನುವ ಕಾಂಗ್ರೆಸ್,ಜೆಡಿಎಸ್ ಪಕ್ಷಗಳಿಗೆ ಇಲ್ಲಿನ ಜನತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!