ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ದಮಾನ್ ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ
ದೆಹಲಿ: ಫೆಬ್ರವರಿ 2019 ರಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ, ನವೆಂಬರ್ 22 ರಂದು ವೀರ ಚಕ್ರ ಪ್ರಶಸ್ತಿ ನೀಡಿದರು.
ಭಾರತದ ಬಾಲಾಕೋಟ್ ವೈಮಾನಿಕ ದಾಳಿಯ ಸಮಯದಲ್ಲಿ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ F-16 ಅನ್ನು ಹೊಡೆದುರುಳಿಸಿದರು ಆದರೆ ಅವರ ವಿಮಾನವನ್ನು ಶತ್ರು ಪಡೆಗಳು ಹೊಡೆದುರುಳಿಸಿದ ನಂತರ ಪಾಕಿಸ್ತಾನದ ಸೇನೆಯು ವಶಪಡಿಸಿಕೊಂಡರು. ಆಗ ಅಭಿನಂದನ್ ವಿಂಗ್ ಕಮಾಂಡರ್ ಆಗಿದ್ದರು.





