February 2, 2026

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ಪಾದಚಾರಿ ಮೃತ್ಯು

0
IMG-20230306-WA0037.jpg

ಉಡುಪಿ: ನಗರದ ತ್ರೀವೇಣಿ ಸರ್ಕಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ರಾಜಶೇಖರ ಪೂಜಾರಿ (68) ಎಂದು ಗುರುತಿಸಲಾಗಿದೆ.

ರಾಜಶೇಖರ ಪೂಜಾರಿ ಅವರು ರೂಮಿನಿಂದ ತ್ರಿವೇಣಿ ಹೊಟೇಲಿಗೆ ಕೆಲಸ ಬರುತ್ತಿರುವಾಗ ಉಡುಪಿ ಕೆಎಂ ಮಾರ್ಗ ಕಡೆಯಿಂದ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇನ್ನು ಗಂಭೀರ ಸ್ವರೂಪದ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!