June 30, 2026

ಮಂಗಳೂರು: ಕಳವಾದ ಮೊಬೈಲ್‌ ಪತ್ತೆ ಹಚ್ಚಲು 8277949183ಗೆ whatsapp ಮಾಡಿ

0
IMG-20230417-WA0207.jpg

ಮಂಗಳೂರು: ಕಳವಾದ ಮೊಬೈಲ್‌ ಪತ್ತೆ ಹಚ್ಚಲು ಕೇಂದ್ರ ಸರ್ಕಾರ ಪ್ರತ್ಯೇಕ ಪೋರ್ಟಲ್‌ (www.ceir.gov.in) ಅನ್ನು ಇತ್ತೀಚೆಗೆ ಆರಂಭಿಸಿದೆ. ಆದರೆ, ಅದರಲ್ಲಿ ವಿವರಗಳನ್ನು ತುಂಬಲು ಕೆಲವು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ.

ಈ ಪ್ರಕ್ರಿಯೆಯನ್ನು ಸರಳಗೊಳಿಸಲು ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ವಾಟ್ಸ್‌ಆ್ಯಪ್‌ ಮೂಲಕ ದೂರು ನೀಡುವ ಚಾಟ್‌ಬೋಟ್‌ ಸೇವೆಯನ್ನು ಜಾರಿಗೊಳಿಸಲಾಗಿದೆ. ಇದನ್ನು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಬಿಡುಗಡೆಗೊಳಿಸಿದರು.

ಮೊಬೈಲ್‌ ಕಳವಾದ ಬಗ್ಗೆ 8277949183 ವಾಟ್ಸ್‌ಆ್ಯಪ್‌ ಸಂಖ್ಯೆಗೆ ಹಾಯ್ ಎಂದು ಸಂದೇಶ ಕಳುಹಿಸಿದರೆ ಸಾಕು. ತಕ್ಷಣ ಹಾಯ್‌ ಕಳುಹಿಸಿದವರ ವಾಟ್ಸ್‌ಆ್ಯಪ್‌ಗೆ ಒಂದು ಲಿಂಕ್‌ ಬರುತ್ತದೆ. ಆ ಲಿಂಕ್‌ನಲ್ಲಿ ಕಳವಾದ ಮೊಬೈಲ್‌ನ ಐಎಂಇಐ ಸಂಖ್ಯೆಯೂ ಸೇರಿ ಕೆಲವು ವಿವರಗಳನ್ನು ಭರ್ತಿ ಮಾಡಿದರೆ ಆ ಮಾಹಿತಿಯನ್ನು ಪೊಲೀಸ್‌ ಇಲಾಖೆಯ ಸಿಬ್ಬಂದಿಯೇ ಸಿಇಐಆರ್‌ ಪೋರ್ಟಲ್‌ನಲ್ಲಿ ತುಂಬಿಸಿ, ಮೊಬೈಲ್‌ ಪತ್ತೆಗೆ ನೆರವಾಗುತ್ತಾರೆ’ ಎಂದು ಕುಲ್‌ದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದರು.

ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಪೊಲೀಸ್‌ ಠಾಣೆಗಳಿಗೆ ಭೇಟಿ ನೀಡುವ ಸಾರ್ವಜನಿಕರಿಂದ ಇಲಾಖೆಯ ಸೇವೆಯ ಗುಣಮಟ್ಟದ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪೊಲೀಸ್‌ ಇಲಾಖೆ ಮುಂದಾಗಿದೆ. ಇದಕ್ಕಾಗಿ ಕ್ಯೂ.ಆರ್‌.ಕೋಡ್‌ ಸ್ಕ್ಯಾನ್‌ ಮಾಡಿ ಪ್ರತಿಕ್ರಿಯೆ ಹಂಚಿಕೊಳ್ಳುವ ಸೇವೆಯನ್ನು ಆರಂಭಿಸಲಾಗಿದೆ.

ಪ್ರತಿ ಠಾಣೆಗಳಲ್ಲೂ ಕ್ಯೂ.ಆರ್‌.ಕೋಡ್‌ ಅನ್ನು ಪ್ರದರ್ಶಿಸಲಾಗುತ್ತದೆ. ಇದನ್ನು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಬಿಡುಗಡೆಗೊಳಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!