June 30, 2026

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯ 123 ಕೋಟಿ ರೂ. ಏರಿಕೆ

0
image_editor_output_image-1388638462-1681769883174.jpg

ಮಂಗಳೂರು: ದೇಶದಲ್ಲಿಯೇ ಹೆಚ್ಚು ಭಕ್ತರನ್ನು ಸೆಳೆಯುವ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ ರೂಪದಲ್ಲಿ 123 ಕೋಟಿ ರೂಪಾಯಿಯನ್ನು ಗಳಿಸಿದೆ.

ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಬಂದಿರುವ ಆದಾಯ ಇದಾಗಿದೆ. ಈ ವಾರ್ಷಿಕ ಅವಧಿಯಲ್ಲಿ 123,64,49,480,47 ರೂ. ಆದಾಯ ಗಳಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ಇತಿಹಾಸದಲ್ಲೇ ಅತಿ ಹೆಚ್ಚು ಆದಾಯ ಗಳಿಸಿ ದಾಖಲೆ ಬರೆದಿದೆ. ಈ ಮೂಲಕ ಈ ಬಾರಿಯೂ ರಾಜ್ಯದಲ್ಲಿ ಮೊದಲ ಸ್ಥಾನ ಪಡೆಯುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *

You may have missed

error: Content is protected !!