February 2, 2026

ರಸ್ತೆ ಅಪಘಾತ: ರಾಮಮಂದಿರ ನಿರ್ಮಾಣಕ್ಕಾಗಿ 1.1 ಕೋಟಿ ರೂ. ದೇಣಿಗೆ ನೀಡಿದ್ದ ಸಂತ ಮೃತ್ಯು

0
image_editor_output_image1537659326-1681770348653.jpg

ಮಧ್ಯಪ್ರದೇಶ: ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 1.1 ಕೋಟಿ ರೂ. ದೇಣಿಗೆ ನೀಡಿದ್ದ ಖ್ಯಾತ ಸಂತ ಮಹಾಂತ್‌ ಕನಕ ಬಿಹಾರಿ ಮಹಾರಾಜ್‌ ಅವರು ಸೇರಿದಂತೆ ಕಾರು ಚಾಲಕ ಅಸುನೀಗಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮಹಾಂತ್‌ ಅವರು ಪ್ರಯಾಗರಾಜ್‌ನಿಂದ ಛಿಂದ್‌ವಾರದಲ್ಲಿರುವ ತಮ್ಮ ಆಶ್ರಮಕ್ಕೆ ತೆರಳುತ್ತಿದ್ದಾಗ ಬರ್ಮನ್ ಸಗ್ರಿ ಬಳಿಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಘಟನೆ ನಡೆದ ಕೂಡಲೇ ಅಲ್ಲಿದ್ದ ಸ್ಥಳೀಯರು ಮಹಾಂತ್ ಸೇರಿ ಮೂವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಮಹಾಂತ್ ಹಾಗೂ ಕಾರು ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಂತ್ ಕನಕ್ ಬಿಹಾರಿ ಮಹಾರಾಜ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 1 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ದೇಣಿಗೆ ನೀಡಿದ್ದರು.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!