June 30, 2026

ರಸ್ತೆಯಲ್ಲಿದ್ದ ಕಬ್ಬಿಣದ ಹೋರ್ಡಿಂಗ್ ಕುಸಿತ: ಐವರು ಸಾವು, ಇಬ್ಬರು ಗಂಭೀರ

0
image_editor_output_image213305921-1681770696796.jpg

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್‌ನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ-ಪುಣೆ ಹೆದ್ದಾರಿಯ ರಾವೆಟ್ ಕಿವಾಲೆ ಪ್ರದೇಶದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.

“ಕೆಲವರು ಬಿರುಗಾಳಿಯಿಂದ ಕಬ್ಬಿಣದ ಹೋರ್ಡಿಂಗ್ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೋರ್ಡಿಂಗ್ ಅವರ ಮೇಲೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಐದು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಯಾರಾದರೂ ಹೋರ್ಡಿಂಗ್ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆಯೇ ಎಂದು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!