ಕಡಬ: ಕಾರು ಮತ್ತು ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಘಟನೆ ನಡೆದಿದ್ದು. ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

