February 2, 2026

ಬಿಜೆಪಿಯಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆ ಬಿ. ಎಲ್ ಸಂತೋಷ ಕಾರಣ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

0
IMG-20230418-WA0023.jpg

ಮೈಸೂರು: ಬಿಜೆಪಿ ಈ ಎಲ್ಲಾ ಬೆಳವಣಿಗೆ ಬಿ. ಎಲ್ ಸಂತೋಷ ಕಾರಣ. ಬಿಜೆಪಿ ಈಗ ಬಿ.ಎಲ್ ಸಂತೋಷ ಕಪಿ ಮುಷ್ಟಿಯಲ್ಲಿ ಸಿಲುಕಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನಿಗೆ ಬಾಯಿ ಸರಿ ಇರಲಿಲ್ಲ. ಅವರಿಗೆ ಸರಿಯಾದ ಶಾಸ್ತಿ ಮಾಡಿದ್ದು ಸರಿ. ಆದರೆ ಜಗದೀಶ್ ಶೆಟ್ಟರ್, ಸವದಿ, ರಾಮದಾಸ್ ಅವರ ಏನು ತಪ್ಪು ಮಾಡಿದ್ದರು. ಅವರ ಮೇಲೆ ಯಾವ ಆರೋಪಗಳು ಇಲ್ಲ. ಆದರೂ ಟಿಕೆಟ್ ತಪ್ಪಿಸಲಾಗಿದೆ. ಶೆಟ್ಟರ್ ಬಿ.ಎಲ್ ಸಂತೋಷ ಮೇಲೆ ಮಾಡಿರುವ ಆರೋಪಗಳು ಸರಿಯಿದೆ ಎಂದರು.

ಇನ್ನು ಸೋಮಣ್ಣನನ್ನು ಹರಕೆಯ ಕುರಿ ಮಾಡಲಾಗುತ್ತಿದೆ. ಸೋಮಣ್ಣ ಸ್ಪರ್ಧೆಗೆ ಬಿ.ಎಲ್.ಸಂತೋಷ ಒತ್ತಡವೇ ಕಾರಣ. ದುಡ್ಡಿರುವ ಒಬ್ಬನು ಬೇಕು ಎಂದು ಇಲ್ಲಿಗೆ ತಂದು ಹಾಕಲಾಗಿದೆ ಎಂದಿದ್ದಾರೆ.

ನನ್ನ ಮತ್ತು ವರುಣ ಕ್ಷೇತ್ರದ ಸಂಬಂಧವನ್ನು ಕಿತ್ತು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಗ್ಗೆ ವರುಣ ಜನಕ್ಕೆ ಅಪಾರ ಪ್ರೀತಿ ವಿಶ್ವಾಸ ಇದೆ. ಯಾರೇ ಬರಲಿ, ಯಾರೇ ಅಭ್ಯರ್ಥಿಗಳನ್ನ ಬದಲಾಯಿಸಲಿ ಏನೇ ಆದರೂ ನನ್ನ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!