August 15, 2026

ಕಾಂಗ್ರೆಸ್ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಕ್ಷೇತ್ರ ಇನ್ನೂ ಪೆಂಡಿಂಗ್

0
Screenshot_2023-04-15-15-05-57-77_680d03679600f7af0b4c700c6b270fe7.jpg

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 4ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 7 ಮಂದಿ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಸಿ.ಟಿ ರವಿ ಅವರ ಆಪ್ತ ಹೆಚ್.ಡಿ ತಮ್ಮಯ್ಯ ಅವರಿಗೆ ಕಾಂಗ್ರೆಸ್ರ ಟಿಕೆಟ್ ಘೋಷಿಸಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸರಾಜು ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿದೆ.

ಈವರೆಗೆ ಒಟ್ಟು 216 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, 8 ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನೂ ಬಾಕಿಯುಳಿಸಿದೆ. ಬಹುನಿರೀಕ್ಷೆಯ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು 4ನೇ ಪಟ್ಟಿಯಲ್ಲೂ ಘೋಷಿಸಿಲ್ಲ.

ಕಾಂಗ್ರೆಸ್ 4ನೇ ಅಭ್ಯರ್ಥಿಗಳ ಪಟ್ಟಿ

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ – ಜಗದೀಶ್ ಶೆಟ್ಟರ್

ಚಿಕ್ಕಮಗಳೂರು ಕ್ಷೇತ್ರ – ಹೆಚ್ ಡಿ ತಮ್ಮಯ್ಯ

ಲಿಂಗಸಗೂರು – ದುರ್ಗಪ್ಪ ಹೂಲಗೇರಿಗೆ ಟಿಕೆಟ್

ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ

ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್ ಯೂಸುಫ್ ಸವಣೂರು

ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ

ಶ್ರವಣಬೆಳಗೊಳ ಕ್ಷೇತ್ರ – ಎಂಎ ಗೋಪಾಲಸ್ವಾಮಿ

Leave a Reply

Your email address will not be published. Required fields are marked *

You may have missed

error: Content is protected !!