February 2, 2026

ಇದು ನನ್ನ ಕೊನೆಯ ಚುನಾವಣೆ, ಬಹುಮತದಿಂದ ಗೆಲ್ಲಿಸಿ: ನಾಮಪತ್ರ ಸಲ್ಲಿಸಿ ಮತದಾರರಲ್ಲಿ ಸಿದ್ದರಾಮಯ್ಯ ಮನವಿ

0
IMG-20230419-WA0022.jpg

ಮೈಸೂರು: ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದು, ಇದು ನನ್ನ ಕೊನೇ ಚುನಾವಣೆ, ಬಹುಮತದಿಂದ ಗೆಲ್ಲಿಸಿ ಎಂದು ಮತದಾರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪೂಜೆ ಸಲ್ಲಿಸಿ ನಂಜನಗೂಡಿನಲ್ಲಿ ನಡೆದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನಗೆ ಕೊನೆಯ ಚುನಾವಣೆ, ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಇದು ನನ್ನ ಕೊನೆಯ ಚುನಾವಣೆ, ಆಮೇಲೆ ಯತೀಂದ್ರ, ಧವನ್ ರಾಕೇಶ್ ಇದ್ದಾರೆ. ಧವನ್‌ ರಾಜಕೀಯಕ್ಕೆ ಬರಲು ಇನ್ನೂ 8 ವರ್ಷ ಬೇಕು. ಓದು ಮುಗಿಸಿದ ನಂತರ ರಾಜಕಾರಣಕ್ಕೆ ಬರುತ್ತಾನೆ. ರಾಕೇಶ್‌ ಮೇಲೆ ಇದ್ದ ಪ್ರೀತಿಯನ್ನ ಅವನ ಮಗನ ಮೇಲೂ ತೋರಿಸುತ್ತಿದ್ದೀರಿ ಅದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!