ದಾಖಲೆ ಇಲ್ಲದ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಚೆಕ್ ಪೋಸ್ಟ್ ಪೊಲೀಸರು
ಧಾರವಾಡ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7 ಕೆಜಿ 700 ಗ್ರಾಂ ತೂಕದ ಚಿನ್ನಾಭರಣಗಳನ್ನು ಧಾರವಾಡ ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆದಿದ್ದಾರೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




