August 12, 2026

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರವಾಗಿ ಹತ್ಯೆ

0
image_editor_output_image-357221975-1681946381142.jpg

ಧಾರವಾಡ: ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.

ಪ್ರವೀಣ ಕಮ್ಮಾರ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ.

ನಿನ್ನೆ ತಡರಾತ್ರಿ ವೈಯಕ್ತಿಕ ಕಾರಣಕ್ಕಾಗಿ ನಡೆದಿದ್ದ ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದರು.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ ಗರಗ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!