February 2, 2026

ಮಂಗಳೂರು: ಜೆಸಿಬಿಯ ಮೇಲೆ ಕುಸಿದು ಬಿದ್ದ ಮಣ್ಣು: ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವು

0
image_editor_output_image553176941-1681976248332.jpg

ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.

ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು.

ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಅದರಲ್ಲಿ ಜೆಸಿಬಿಯ ಚಾಲಕ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಬಜಪೆ ಪೊಲೀಸರು ಧಾವಿಸಿ ಬಂದಿದ್ದರು. ಸ್ಥಳೀಯರು ಹಾಗೂ ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆಗೆಯಲಾಯಿತಾದರೂ, ಅದಾಗಲೇ ಚಾಲಕ ಮೃತಪಟ್ಟಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!