ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮಾನಾಥ ರೈ ನಾಮಪತ್ರ ಸಲ್ಲಿಕೆ
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಇಂದು 12.35ಕ್ಕೆ ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ ಪೇಟೆ ಜುಮಾ ಮಸೀದಿ ಬಳಿ ಪ್ರಾರ್ಥನೆ ಸಲ್ಲಿಸಿದರು.


ಬಳಿಕ ಚುನಾವಣಾ ಕಚೇರಿಯ ಸಮೀಪದಲ್ಲಿರುವ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನೇರವಾಗಿ ನಾಮಪತ್ರ ಸಲ್ಲಿಕೆಗೆ ತೆರಳಿದರು.






