August 12, 2026

ಉಡುಪಿ: ಉದ್ಯಮಿಗಳ, ಕಂಟ್ರಾಕ್ಟರ್‌ಗಳ ಮನೆ, ಕಚೇರಿ ಮೇಲೆ ಇಡಿ – ಐಟಿ ಅಧಿಕಾರಿಗಳಿಂದ ಪರಿಶೀಲನೆ

0
IMG-20230420-WA0013.jpg

ಉಡುಪಿ: ರಾಜ್ಯದ ಹಲವೆಡೆ ನಡೆದಿರುವ ಇಡಿ, ಐಟಿ ಅಧಿಕಾರಿಗಳ ದಾಖಲೆ ಪರಿಶೀಲನೆ ಕಾರ್ಯ ಉಡುಪಿಯಲ್ಲಿ ಕೂಡಾ ನಡೆದಿದ್ದು, ಉಡುಪಿಯ ಹಲವು ಉದ್ಯಮಿ, ಕಂಟ್ರಾಕ್ಟರ್ ದಾರರ ಮನೆಗಳಲ್ಲಿ ದಾಖಲೆ ಪರೀಶೀಲನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಇಡಿ ಅಧಿಕಾರಿಗಳು ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿ ಯ ಮಾಲಿಕತ್ವದ ಮಲ್ಪೆಯಲ್ಲಿರುವ ಗೆಸ್ಟ್ ಹೌಸ್ ನ ಕಚೇರಿ, ರೆಸ್ಟೋರೆಂಟ್, ಅಂಗಡಿ, ಮನೆ ಮತ್ತು ಇತರ ಕಡೆಗಳಲ್ಲಿ 10 ರಿಂದ 12 ಜನ ಡಿ ಅಧಿಕಾರಿಗಳು ಏಕಕಾಲಕ್ಕೆ ದಾಖಲೆ ಪರೀಶೀಲನೆ ನಡೆಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಉಡುಪಿಯ ಪ್ರಥಮ ದರ್ಜೆ ಪಿ ಡ್ಬ್ಲೂಡಿ ಕಂಟ್ರಕ್ಟರ್ ಡಾ. ಜಿ ಶಂಕರ್ ಸಂಸ್ಥೆಗಳಲ್ಲಿ ಕೂಡಾ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನೋಂದಣಿಯ ವಾಹನದಲ್ಲಿ ಆಗಮಿಸಿದ ಅಧಿಕಾರಿಗಳು ಏಕಕಾಲದಲ್ಲಿ ಜಿ.ಶಂಕರ್ ಮನೆ ಸೇರಿ, ಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!