February 2, 2026

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

0
IMG-20230420-WA0010.jpg

ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಮೆರವಣಿಗೆಯಲ್ಲಿ ತೆರಳಿದ ಅವರು, ಉಳ್ಳಾಲ ನಗರಸಭೆ ಕಾರ್ಯಾಲಯದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಉಳ್ಳಾಲ ಬೈಲ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಯು.ಟಿ.ಖಾದರ್, ಇದು ಸತ್ಯ ಧರ್ಮದ, ಅನ್ಯಾಯದ ವಿರುದ್ಧದ ನ್ಯಾಯದ ಚುನಾವಣೆಯಾಗಿದೆ. ಜನವಿರೋದಿ, ತಾರತಮ್ಯ ಮಾಡುವ ಸರ್ಕಾರವನ್ನು ಕೆಳಗಿಸುವ ಚುನಾವಣೆಯಾಗಿದೆ ಎಂದರು.

ಇನ್ನು ಸಮಾವೇಶದ ಬಳಿಕ ಅಬ್ಬಕ್ಕ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿದ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದರು.

ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಇಬ್ರಾಹೀಂ ಕೋಡಿಜಾಲ್, ಡಾ.ಕಣಚೂರು ಮೋನು, ಹರ್ಷರಾಜ್ ಮುದ್ಯ, ದಿನೇಶ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಸ್ತಫಾ ಹರೇಕಳ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!