ಆತ್ಮಹತ್ಯೆಗೆ ಪ್ರಚೋದನೆ: RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ರಾಘವೇಶ್ವರ ಭಾರತೀ ಶ್ರೀ ವಿರುದ್ಧ ದಾಖಲಾಗಿದ್ದ FIR ರದ್ದು
ಬೆಂಗಳೂರು: ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀ ಮತ್ತು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ.
ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಆರೋಪಪಟ್ಟಿ ದಾಖಲಿಸಿದ್ದರು. ಸದ್ಯ ನ್ಯಾ. ಹೇಮಂತ ಚಂದನಗೌಡರ್‌ರಿದ್ದ ಹೈಕೋರ್ಟ್ ಪೀಠ, ಶ್ರೀಗಳ ಮತ್ತು ಕಲ್ಲಡ್ಕ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.




