II PUC RESULT: 5,24,209 ವಿದ್ಯಾರ್ಥಿಗಳು ಉತ್ತೀರ್ಣ
ಬೆಂಗಳೂರು, ಎ.21: ಇದೇ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶುಕ್ರವಾರ ಪ್ರಕಟವಾಗಿದೆ.
2022-23ನೆ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9ರಿಂದ 29ರವರೆಗೆ ನಡೆಸಲಾಗಿತ್ತು. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನವೂ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್, 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ, ಎರಡನೇ ಸ್ಥಾನ ಉಡುಪಿ, ಮೂರನೇ ಸ್ಥಾನ ಕೊಡಗು, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಇದೆ.
ಕಲಾ ವಿಭಾಗದಲ್ಲಿ 593 ಅಂಕ ಪಡೆಯುವ ಮೂಲಕ ತಬಸೂಮ್ ಶೇಖ್ ರಾಜ್ಯಕ್ಕೆ ಮೊದಲ ಸ್ಥಾನ ಮೊದಲ ಸ್ಥಾನ ಪಡೆದಿದ್ದಾರೆ.




