ನನ್ನ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಅವರ ತಂಡ ಹೊಣೆ: ಸತ್ಯಜೀತ್ ಸುರತ್ಕಲ್
ಮಂಗಳೂರು : ನನ್ನ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದ್ದು, ಒಂದು ವೇಳೆ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಧ್ಯಕ್ಷ ಮತ್ತು ಅವರ ತಂಡ ಹೊಣೆ ಎಂದು ಹಿಂದೂ ಪರ ಹೋರಾಟಗಾರರ ಮುಖಂಡ ಸತ್ಯಜೀತ್ ಸುರತ್ಕಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಳೆದ ಸುಮಾರು 16 ವರ್ಷಗಳಿಂದ ಮುಸ್ಲಿಂ ಮೂಲಭೂತವಾದಿಗಳಿಂದ ಜೀವ ಬೆದರಿಕೆ ಇದ್ದ ಕಾರಣಕ್ಕೋಸ್ಕಕ್ಕೋಸ್ಕರ ಸರಕಾರವೇ ನನಗೆ ಭದ್ರತೆ ನೀಡಿತ್ತು.
ಹದಿನಾರು ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ.
ನನ್ನ ಹತ್ಯೆಗೆ ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ರಿವಾಲ್ವರ್ ಕೂಡ ತೆಗೆದಿಟ್ಟುಕೊಂಡಿದ್ದಾರೆ.
ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಕಾರ್ಯಗಳಿಂದಾಗಿ ಬೆದರಿಕೆ ಬಂದಿತ್ತೆ ಹೊರತು ನನ್ನ ವೈಯಕ್ತಿಕ ವಿಷಯಕ್ಕಾಗಿ ಅಲ್ಲ ಎಂದರು.




