ಚಾಮರಾಜನಗರ: ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣವಾಗಿದ್ದರಿಂದ ಮನನೊಂದು ನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಗುಂಡ್ಲುಪೇಟೆ ತಾಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.