December 19, 2025

ವಿಧಾನ ಪರಿಷತ್ ಚುನಾವಣೆ:
ಕಾಂಗ್ರೆಸ್ ಅಭ್ಯರ್ಥಿ ಯಾಗಿ ಮಂಜುನಾಥ್ ಭಂಡಾರಿ

0
IMG-20211122-WA0090.jpg

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ದ್ವಿಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಮಂಜುನಾಥ್ ಭಂಡಾರಿ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರತಾಪ್ ಚಂದ್ರ ಶೆಟ್ಟಿ ಅವರು ಈ ಬಾರಿ ಸ್ಪರ್ಧಿಸಲು ನಿರಾಕರಿಸಿರುವುದರಿಂದ ಹಲವು ಮಂದಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. 2014 ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಂಜುನಾಥ್ ಭಂಡಾರಿ ಈ ಬಾರಿ ವಿಧಾನಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿಲ್ಲದಿದ್ದರೂ, ಕೇಂದ್ರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೃಪಕಟಾಕ್ಷದಿಂದ ಮಂಜುನಾಥ್ ಭಂಡಾರಿ ಅವರಿಗೆ ಟಿಕೆಟ್ ದೊರೆತಿದೆ.

Leave a Reply

Your email address will not be published. Required fields are marked *

You may have missed

error: Content is protected !!