February 2, 2026

ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಕೊಲೆ: ಭುಗಿಲೆದ್ದ ಹಿಂಸಾಚಾರ

0
682hso6g_bengal-rape-1200_625x300_22_April_23.jpg

ಪಶ್ಚಿಮ ಬಂಗಾಳ: ಕಲಿಯಾಗಂಜ್‌ನಲ್ಲಿ ಶನಿವಾರ ಅಪ್ರಾಪ್ತ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆಯ ನಂತರ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬಂದಿ ಸಂತ್ರಸ್ತೆಯ ಮೃತದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ.

ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಉತ್ತರ ದಿನಜ್‌ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್‌ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ.

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹಂಚಿಕೊಂಡ ವಿಡಿಯೋದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಬಾಲಕಿಯ ಮೃತ ದೇಹವನ್ನು ಎಳೆಯುವುದನ್ನು ಕಾಣಬಹುದಾಗಿದೆ. ಅಪ್ರಾಪ್ತ ಬಾಲಕಿ ರಾಜ್‌ಬೊಂಗ್ಷಿ ಸಮುದಾಯಕ್ಕೆ ಸೇರಿದವಳು ಎಂದೂ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!