September 20, 2024

ಕಾಸರಗೋಡು: ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಾಗಾಟ: ಮಹಿಳೆ ಸಹಿತ ನಾಲ್ವರ ಬಂಧನ

0

ಕಾಸರಗೋಡು: ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ.

ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಉದುಮ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಬೆಂಗಳೂರಿನಿಂದ ಮಾದಕ ವಸ್ತುವನ್ನು ಸಾಗಾಟ ಮಾಡಿದ್ದಾಗಿ ಬಂಧಿತರು ವಿಚಾರಣೆ ವೇಳೆ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!