ಪೊಲೀಸರ ಬಲೆಗೆ ಬಿದ್ದ ಅಮೃತ್ಪಾಲ್ ಸಿಂಗ್:
ಖಲಿಸ್ತಾನಿ ಪರ ನಾಯಕ ಅರೆಸ್ಟ್
ಚಂಡೀಗಢ: ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಒಂದು ತಿಂಗಳ ಹಿಂದಿನಿಂದ ತಲೆಮರೆಸಿಕೊಂಡಿದ್ದ ಸ್ವಘೋಷಿತ ಮೂಲಭೂತವಾದಿ ಹಾಗೂ ಸಿಖ್ ಭೋಧಕ ಅಮೃತಪಾಲ್ ಸಿಂಗ್ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸಮಾಜದಲ್ಲಿ ಅಶಾಂತಿ ಎಬ್ಬಿಸಲು ಪ್ರಯತ್ನಿಸಿದ್ದ ಅಮೃತ್ ಪಾಲ್ ಸಿಂಗ್ ಸಹಚರರನನ್ನು ಇತ್ತೀಚೆಗೆ ಬಂಧಿಸಿ, ಅಪಾರ ಪ್ರಮಾಣದಲ್ಲಿ ಶಸ್ತಾಸ್ತ್ರಗಳನ್ನು ವಶಪಡಿಕೊಳ್ಳಲಾಗಿತ್ತು.
ಪಂಜಾಬ್‌ನ ಮೊಗ ಬಳಿಯ ಗುರುದ್ವಾರದಲ್ಲಿ ಅಮೃತ್ಪಾಲ್ ಸಿಂಗ್ ಅಡಗಿಕೊಂಡಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಅದರನ್ವಯ ಕಾರ್ಯಪ್ರವೃತ್ತರಾದ ಪೊಲೀಸರು ಅಮೃತ್ ಪಾಲ್ ನನ್ನು ಪತ್ತೆ ಹಚ್ಚಿ ಆತನ ಕೈಗೆ ಕೋಳ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಅಮೃತ್ ಪಾಲ್ ಸಿಂಗ್‌ನನ್ನು ಡಿಬ್ರುಗಢ ಜೈಲಿಗೆ ಕರೆದೊಯ್ಯಲಾಗಿದೆ.
ಈ ವೇಳೆ ಖಲಿಸ್ತಾನ್ ಸಹಾನುಭೂತಿಯು ಜಲಂಧರ್ ಜಿಲ್ಲೆಯಲ್ಲಿ ಪೊಲೀಸರ ಬಲೆಯಿಂದ ತಪ್ಪಿಸಿಕೊಂಡು, ವಾಹನಗಳನ್ನು ಬದಲಿಸಿ ಸಿನಿಮೀಯ ರೂಪದಲ್ಲಿ ಅಮೃತ್ ಪಾಲ್ ಎಸ್ಕೇಪ್ ಆಗಿದ್ದ. ಅಂದಿನಿಂದಲೂ ಈತನಿಗಾಗಿ ದೇಶದಲ್ಲಿ ಹುಡುಕಾಟ ನಡೆಯುತ್ತಲೇ ಇತ್ತು. ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದೂ ಹೇಳಲಾಗಿತ್ತು. ಕೊನೆಗೂ ಈತನನ್ನು ಬಂಧಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ.




