February 2, 2026

ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ

0
n49284820616822266452401ffd616ac11382bdf94fc9c50a0640249d5801d8b34b853351ebee75b5f79235.jpg

ಬೆಂಗಳೂರು: ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ. ಸ್ಯಾಂಡಲ್’ವುಡ್’ ಕೆಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಸಂಪತ್ ಜಯರಾಮ್ ಅವರು ನಟಿಸಿದ್ದರು.

ಅಗ್ನಿಸಾಕ್ಷಿ ಸೇರಿದಂತೆ ಹಲವು ಸೀರಿಯಲ್, ಸಿನಿಮಾಗಳಲ್ಲಿ ನಟಿಸಿದ್ದ ಯುವ ನಟ ಸಂಪತ್ ಜಯರಾಮ್ ನಿನ್ನೆ ನೆಲಮಂಗಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಇತ್ತೀಚೆಗೆ ಕೆಲ ದಿನಗಳಿಂದ ಸೂಕ್ತ ಅವಕಾಶ ಸಿಗಲಿಲ್ಲ ಎಂಬ ಚಿಂತೆ ಸಂಪತ್ ಅವರಲ್ಲಿ ಎದುರಾಗಿತ್ತು ಎಂದು ವರದಿಗಳು ತಿಳಿಸಿವೆ. ಸಂಪತ್ ಅವರು ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ. ಕಳೆದ 1 ವರ್ಷದ ಹಿಂದೆ ಮದುವೆಯಾಗಿದ್ದ ಯುವ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಖಚಿತ ಮಾಹಿತಿಗಳು ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!