February 2, 2026

ಸರ್ಕಾರಿ ಆಸ್ಪತ್ರೆಯ ವಾರ್ಡ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವೈದ್ಯ

0
image_editor_output_image1232064986-1682308968873.jpg

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ವೈದ್ಯ ಬೆಂಗಳೂರಿನ ಸರ್ಕಾರಿ ಆಸ್ಪತ್ರೆ ವಾರ್ಡ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಇವರು ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಮಕ್ಕಳ ತಜ್ಞರಾಗಿದ್ದ ವೈದ್ಯ ಡಾ.ಎಸ್.ರೇಣುಕಾನಂದ ಅವರು ಆಸ್ಪತ್ರೆಯ ವಾರ್ಡ್‌ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಡ್‌ಶೀಟ್‌ನಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!